ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ 2ನೇ ಸೊಸೆ ಭವಾನಿ ರೇವಣ್ಣ ರಾಜಕೀಯ ಪ್ರವೇಶ ಖಚಿತವಾಗಿದೆ. ಈ ಬಾರಿಯ ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಕಣಕ್ಕಿಳಿದಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹಳೇಕೋಟೆ ಜಿಪಂ ಕ್ಷೇತ್ರದಿಂದ ಭವಾನಿ ರೇವಣ್ಣ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲಕ್ಷ್ಮೀನರಸಿಂಹ ದೇವಾಲಯದಿಂದ ಮಧ್ಯಾಹ್ನ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನಾ ಪತಿ ಹಾಗೂ ಶಾಸಕ ಎಚ್.ಡಿ ರೇವಣ್ಣ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ಜೊತೆ ಭವಾನಿ ರೇವಣ್ಣ ಬೆಳಗ್ಗೆಯಿಂದ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ರು.