ಹಾವೇರಿ: ದೈಹಿಕ ಶಿಕ್ಷಕನನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಹಾವೇರಿ ತಾಲೂಕಿನಲ್ಲಿ ನಡೆದಿದೆ.
ಹಾವೇರಿ ತಾಲೂಕಿನ ಮರೋಳ ಗ್ರಾಮದ ನಿವಾಸಿ ಬಾಬು ಮೈದೂರ್ ಹತ್ಯೆಯಾದ ಶಿಕ್ಷಕ. 45 ವರ್ಷ ವಯಸ್ಸಿನ ಮೈದೂರ್ ಅವರನ್ನು ಮನೆಯ ಬೆಡ್ ರೂಂನಲ್ಲೇ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಲಾಗಿದೆ.
ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಡಿವೈಎಸ್‍ಪಿ ಡಾ.ಗೋಪಾಲ ಬ್ಯಾಕೋಡ ಹಾಗೂ ಸಿಪಿಐ ಲಕ್ಷ್ಮಣ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.