ಚೆನ್ನೈ: ತಮಿಳುನಾಡಿನ ಡಿಎಂಕೆ ಅಧ್ಯಕ್ಷ ಎಂ ಕರುಣಾನಿಧಿ ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
92 ವರ್ಷದ ಕರುಣಾನಿಧಿ ಕಳೆದ ಒಂದು ತಿಂಗಳಿನಿಂದ ಅಲರ್ಜಿಯಿಂದ ಬಳಲುತ್ತಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಕರುಣಾನಿಧಿ ಚೇತರಿಸಿಕೊಂಡಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಆದರೆ ಅವರಿರೋ ಪರಿಸ್ಥಿಯಲ್ಲಿ ಕೆಲ ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕಾಗಿದೆ ಎಂದು ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಅರವಿಂದನ್ ಸೆಲ್ವರಾಜ್ ತಿಳಿಸಿದ್ದಾರೆ.
ಅನಾರೋಗ್ಯದ ಕಾರಣ ಕಳೆದ ಒಂದು ತಿಂಗಳಿನಿಂದ ಕರುಣಾನಿಧಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಕಳೆದ ತಿಂಗಳು ತಮಿಳುನಾಡಿನ 3 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಪ್ರಚಾರದಲ್ಲೂ ಅವರು ಭಾಗವಹಿಸಿರಲಿಲ್ಲ.