Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80435

ಉಪಚುನಾವಣಾ ಕಣದಲ್ಲಿದ್ದ ಅಭ್ಯರ್ಥಿಗೆ ಹೃದಯಾಘಾತ

$
0
0

ಮೈಸೂರು: ಹುಣಸೂರು ಉಪಚುನಾವಣಾ ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿಗೆ ತೀವ್ರ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಣಸೂರು ನಗರದ ಕುಲ್ಕಣಿ ಉಮೇಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಆದರೆ ಇಂದು ಆಯಾಸಗೊಂಡಿದ್ದ ಅವರು ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರು. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಅವರನ್ನು ತಕ್ಷಣವೇ ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಚುನಾವಣಾ ಅಧಿಕಾರಿಗಳು ಉಮೇಶ್ ಅವರಿಗೆ ಕ್ರಮಸಂಖ್ಯೆ 9 ಹಾಗೂ ಫ್ರಾಕ್ ಗುರುತು ನೀಡಿದ್ದಾರೆ. ಬಿಜೆಪಿಯಿಂದ ಎಚ್.ವಿಶ್ವನಾಥ್, ಕಾಂಗ್ರೆಸ್‍ನಿಂದ ಎಚ್.ಪಿ.ಪಾಟೀಲ್, ಜೆಡಿಎಸ್‍ನಿಂದ ಸೋಮಶೇಖರ್ ಸ್ಪರ್ಧೆ ಮಾಡುತ್ತಿದ್ದಾರೆ.

2018ರ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ಎಚ್.ವಿಶ್ವನಾಥ್ 91,667 ಮತಗಳನ್ನು ಪಡೆದು ಗೆದ್ದಿದ್ದರು. ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಮಂಜುನಾಥ್ 83,092 ಹಾಗೂ ಪಕ್ಷೇತರ ಅಭ್ಯರ್ಥಿ ಎಚ್.ಪಿ.ಲಕ್ಷ್ಮಣ 83,092 ಮತ ಗಳಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಜೆ.ಎಸ್.ರಮೇಶ್ ಕುಮಾರ್ ಕೇವಲ 6,406 ಮತ ಪಡೆಯಲು ಶಕ್ತವಾಗಿದ್ದರು.

The post ಉಪಚುನಾವಣಾ ಕಣದಲ್ಲಿದ್ದ ಅಭ್ಯರ್ಥಿಗೆ ಹೃದಯಾಘಾತ appeared first on Public TV News.


Viewing all articles
Browse latest Browse all 80435

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>