ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಕಡತಗಳನ್ನು ಶೀಘ್ರ ವಿಲೇವಾರಿ ಆಡಳಿತದ ವೇಗಕ್ಕೆ ಅಡೆತಡೆಯಾಗಿದೆ. ಈ ಬಗ್ಗೆ ಸಿಎಂ ಕೂಡ ಕಳವಳ ವ್ಯಕ್ತಪಡಿಸಿದ್ರು ಎನ್ನಲಾಗಿದೆ. ಈ ನಡುವೆ ಕಡತ ವಿಲೇವಾರಿ ಪರಿಶೀಲನೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಇಂದು ಸರಣಿ ಸಭೆ ನಡೆಸಲಿದ್ದಾರೆ.
ಅಂದಹಾಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಕಡತಗಳು ವಿಲೇವಾರಿಯಾಗದೇ ಇರುವ ಕುರಿತು ಅಧೀವೇಶನದಲ್ಲಿ ಚರ್ಚೆಯಾಗಿತ್ತು. ಮಾಜಿ ಸಚಿವ ಎಚ್.ಕೆ. ಪಾಟೀಲ್ ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸುವ ಸಂದರ್ಭದಲ್ಲಿ ಸರ್ಕಾರದ ಗಮನ ಸೆಳೆದಿದ್ದರು. ಅಲ್ಲದೆ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಅಧಿಕಾರಿಗಳ ಸಭೆಯಲ್ಲಿ ಕಡತ ವಿಲೇವಾರಿ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಸಭೆ ನಡೆಸಲಿದ್ದಾರೆ. ವಿವಿಧ ಇಲಾಖೆಗಳ ಅಪರ, ಮುಖ್ಯ, ಪ್ರಧಾನ ಕಾರ್ಯದರ್ಶಿಗಳು, ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಕಡತ ವಿಲೇವಾರಿ ವಿಳಂಬಕ್ಕೆ ಕಾರಣ ತಿಳಿದು ಇತ್ಯರ್ಥಕ್ಕೆ ಸೂಚನೆ ನೀಡಲಿದ್ದಾರೆ.
* ವಿಲೇವಾರಿಯಾಗದೆ ಬಾಕಿ ಉಳಿದ ಕಡತಗಳು
1. ಕಂದಾಯ ಇಲಾಖೆಯಲ್ಲಿ 10,680 ಕಡತಗಳು
2. ನಗರಾಭಿವೃದ್ಧಿ ಇಲಾಖೆಯಲ್ಲಿ 9,277 ಕಡತಗಳು
3. ಪ್ರಾಥಮಿಕ- ಪ್ರೌಢ ಶಿಕ್ಷಣ ಇಲಾಖೆಯಲ್ಲಿ 5,329 ಕಡತಗಳು
4. ಪಂಚಾಯತ್ ರಾಜ್ ಇಲಾಖೆಯಲ್ಲಿ 4,504 ಕಡತಗಳು
5. ಒಳಾಡಳಿತ ಇಲಾಖೆಯಲ್ಲಿ 4,283 ಕಡತಗಳು
6. ಸಿಬ್ಬಂದಿ-ಆಡಳಿತ ಸುಧಾರಣೆ ಇಲಾಖೆಯಲ್ಲಿ 4,491 ಕಡತಗಳು
The post ರಾಜ್ಯ ಸರ್ಕಾರದ ಕಡತಗಳ ವಿಲೇವಾರಿಗೆ ಇಂದು ಸರಣಿ ಸಭೆ appeared first on Public TV News.