ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಇಂದು ನಾಲ್ವರು ಬಲಿಯಾಗಿದ್ದು, ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಸಂತ್ರಸ್ತರಿಗೆ ನೆರವು ನೀಡುತ್ತಿರುವ ಗುರು ತೇಜ್ ಬಹದ್ದೂರ್ ಆಸ್ಪತ್ರೆ ಮೂಲಗಳಿಂದ ಮಾಹಿತಿ ನೀಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಈಶಾನ್ಯ ದೆಹಲಿಯ ಹತ್ತು ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು ಜಫರಾಬಾದ್, ಗೋಕುಲ್‍ಪುರಿ, ಮೌಜ್‍ಪುರ್ ಸೀಲಂಪುರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ. ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ದೆಹಲಿ ಪೊಲೀಸ್ ಕಂಡಲ್ಲಿ ಗುಂಡು ಹಾರಿಸುವ ಆದೇಶ ನೀಡಿದೆ.
Delhi: Latest visuals from Jafrabad metro station. The protesters left the metro station last night. #NortheastDelhi https://t.co/VA0MyUsiJd pic.twitter.com/YjbRDjsMLY
— ANI (@ANI) February 26, 2020
ಪರಿಸ್ಥಿತಿ ನಿಯಂತ್ರಣಕ್ಕೆ ಬಂದ್ದಂತೆ ಕಂಡು ಬಂದರೂ ಈಶಾನ್ಯ ದೆಹಲಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಚ್ಚೇರಿಕೆ ಕ್ರಮವಾಗಿ ಹೆಚ್ಚುವರಿ ದೆಹಲಿ ಪೊಲೀಸ್ ಮತ್ತು ಶಸ್ತ್ರ ಸಜ್ಜಿತ ಮೀಸಲು ಪಡೆಗಳನ್ನು ಸ್ಥಳಗಳಲ್ಲಿ ನಿಯೋಜನೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದ್ದು ಸಿಬಿಎಸ್‍ಸಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ದೆಹಲಿ ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಮಂಗಳವಾರ ಮಧ್ಯರಾತ್ರಿ ಹೈಕೋರ್ಟ್ ವಿಚಾರಣೆ ನಡೆಸಿ, ಜನರಿಗೆ ರಕ್ಷಣೆ ಒದಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ. ಗಲಭೆಯಲ್ಲಿ ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ನೆರವು ಒದಗಿಸಿ ಜನರಿಗೆ ರಕ್ಷಣೆ ನೀಡುವಂತೆ ಆದೇಶಿಸಿದೆ.
The post ದೆಹಲಿಯಲ್ಲಿ ಹಿಂಸಾಚಾರ ಮೃತರ ಸಂಖ್ಯೆ 18ಕ್ಕೆ ಏರಿಕೆ – ತಡರಾತ್ರಿ ವಿಚಾರಣೆ ನಡೆಸಿದ ಹೈಕೋರ್ಟ್ ರಕ್ಷಣೆ ನೀಡಲು ಆದೇಶ appeared first on Public TV News.