ಕೊಪ್ಪಳ: ಅಪ್ರಾಪ್ತ ವಯಸ್ಸಿನಲ್ಲೇ ಮದುವೆ ಮಾಡಿದ್ದಕ್ಕೆ ಮನನೊಂದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ತಾಲೂಕಿನ ಚಾಮಲಾಪುರ ಗ್ರಾಮದ 16 ವರ್ಷದ ನೇತ್ರಾವತಿ ಮೃತ ದುರ್ದೈಯಾಗಿದ್ದು, ಕಳೆದ ನಾಲ್ಕು ತಿಂಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಇಂದು ಗಂಡನ ಮನೆಯವರು ಬಂದು ಕರೆದುಕೊಂಡು ಹೋಗುತ್ತಾರೆ ಎಂದು ವಿಷಯ ತಿಳಿಯುತ್ತಿದಂತೆ ಬೆಳಿಗ್ಗೆ ಹೊಲಕ್ಕೆ ಹೋಗಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿಷಯ ತಿಳಿದ ಸ್ಥಳೀಯರು ಕೂಡಲೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ಸಾಗಿಸಲಾಗುತ್ತಿದ್ರು. ಅಷ್ಟರಲ್ಲೆ ನವ ವಿವಾಹಿತೆ ಪ್ರಾಣತ್ತೆತ್ತಿದ್ದಳು. ಈ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗುತ್ತಿದೆ.
The post ಅಪ್ರಾಪ್ತ ವಯಸ್ಸಿನಲ್ಲೇ ಮದುವೆ: ಕೊಪ್ಪಳದಲ್ಲಿ ನವವಿವಾಹಿತೆ ಆತ್ಮಹತ್ಯೆ appeared first on Kannada Public tv.