Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80022

ಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್: ಮಸೂದೆಗೆ ರಾಷ್ಟ್ರಪತಿ ಸಹಿ

$
0
0

ನವದೆಹಲಿ: ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಕಂಬಳ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುದ್ರೆ ಒತ್ತಿದ್ದಾರೆ. ರಾಜ್ಯ ವಿಧಾನಮಂಡಲದಲ್ಲಿ ಮಂಡನೆಯಾಗಿದ್ದ ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೋಮವಾರ ಸಹಿ ಮಾಡಿದ್ದಾರೆ.

ಸಹಿ ಬಿದ್ದ ಕಾರಣ ಕಂಬಳವನ್ನು ಯಥಾ ಪ್ರಕಾರ ಮುಂದು ವರಿಸುವ ರಾಜ್ಯ ಸರಕಾರದ “ಕಂಬಳ ತಿದ್ದುಪಡಿ ಮಸೂದೆ’ಗೆ ಎದುರಾಗಿದ್ದ ಎಲ್ಲ ಕಾನೂನು ಅಡೆತಡೆಗಳು ದೂರವಾಗಿದೆ.

ಪ್ರಾಣಿ ಹಿಂಸೆ ತಡೆ (ಕರ್ನಾಟಕ ತಿದ್ದುಪಡಿ)ಮಸೂದೆ-2017 ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದು ಫೆ.7ರಂದು ರಾಜ್ಯಪಾಲರ ಒಪ್ಪಿಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ಅದನ್ನು ಫೆ.23ರಂದು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದರು. ಪ್ರಾಣಿ ಹಿಂಸೆ ವಿಚಾರವಾಗಿ ಮಸೂದೆಯಲ್ಲಿ ಬಳಸಿದ ಪದವೊಂದು ಸೂಕ್ತವಲ್ಲದ ಕಾರಣ ಕಾನೂನು ಸಚಿವಾಲಯ ಮಸೂದೆಗೆ ತನ್ನ ಒಪ್ಪಿಗೆ ನೀಡಿರಲಿಲ್ಲ.

ಈ ಮಸೂದೆಯನ್ನು ಪುನರ್ ಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಮತ್ತೆ ರಾಜ್ಯ ಸರ್ಕಾರಕ್ಕೆ ಕಳುಹಿಸಿತ್ತು. ರಾಜ್ಯ ಸರ್ಕಾರ ಕೆಲ ಮಾರ್ಪಾಡುಗಳನ್ನು ಮಾಡಿ ಕಳುಹಿಸಿದ್ದ ಮಸೂದೆಗೆ ಗೃಹಸಚಿವ ರಾಜನಾಥ್ ಸಿಂಗ್ ಜೂನ್ 29ರಂದು ಸಹಿ ಹಾಕಿದ್ದರು.


Viewing all articles
Browse latest Browse all 80022


<script src="https://jsc.adskeeper.com/r/s/rssing.com.1596347.js" async> </script>