Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80395

ಹಣ ಕೊಟ್ರೆ ಜೈಲಲ್ಲೇ ಅರಮನೆ ಸೌಕರ್ಯ: ಆರೋಪ ಸುಳ್ಳು ಎಂದ ಡಿಜಿ, ತನಿಖೆ ಮಾಡ್ಲಿ ಎಂದ ರೂಪಾ

$
0
0

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿ ಶಶಿಕಲಾಗೆ ಯಾವುದೇ ರಾಜಾತಿಥ್ಯ ನೀಡಲಾಗಿಲ್ಲ. ಡಿಐಜಿ ರೂಪಾ ಅವರ ಆರೋಪಗಳು ಎಲ್ಲವೂ ಸುಳ್ಳು ಎಂದು ಮಹಿಳಾ ಕಾರಾಗೃಹ ಡಿಜಿ ಸತ್ಯನಾರಾಯಣ ರಾವ್ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೂಪಾ ಅವರು ಬಂದು ಹೊಸದಾಗಿ ಏನು ಡಿಸ್ಕವರಿ ಮಾಡಿಲ್ಲ. ಅವರ ಆರೋಪಗಳು ಎಲ್ಲವೂ ನಿರಾಧಾರ. ವಿಶೇಷ ಚಿಕಿತ್ಸೆಯನ್ನು ಯಾರಿಗೂ ನೀಡಿಲ್ಲ ಎಂದು ಹೇಳಿದರು.

ರೂಪಾ ಅವರಿಗೆ ಜೈಲಿನ ಬಗ್ಗೆ ಏನು ಗೊತ್ತಿದೆ. ಭೇಟಿ ನೀಡುವುದು, ಫೋಟೋ ಕ್ಲಿಕ್ಕಿಸಿ ಮಾಧ್ಯಮಗಳ ಜೊತೆ ಕೂರುವುದು ಅವರ ಕೆಲಸ. ಫೋಟೋ ಕ್ಲಿಕ್ಕಿಸಿ ಮಾಧ್ಯಮದ ಮುಂದೆ ಹೋಗಿದ್ದಕ್ಕೆ ನಾನು ನೋಟಿಸ್ ಕೊಟ್ಟಿದ್ದೆ. ಈ ಮೆಮೋ ಕೊಟ್ಟಿದ್ದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಾರೆ. ನಾನು ಕಚೇರಿಯಲ್ಲಿ ಇರುವ ತನಕ ಟಪಾಲು ಬಂದಿಲ್ಲ. ನಾನು ಹೊರಗೆ ಹೋದ ಮೇಲೆ ಟಪಾಲು ಕೊಟ್ಟಿದ್ದಾರೆ. ಮಾಧ್ಯಮವನ್ನು ಕಂಡರೆ ರೂಪಾ ಅವರಿಗೆ ಇಷ್ಟ ಎಂದು ಪ್ರತಿಕ್ರಿಯಿಸಿದ್ದಾರೆ.

ಡಿಜಿ ಸತ್ಯನಾರಾಯಣ ಅವರ ಹೇಳಿಕೆಗಳಿಗೆ ಡಿಐಜಿ ರೂಪಾ ಅವರು ಪ್ರತಿಕ್ರಿಯಿಸಿ, ನಾನು ನಾಲ್ಕು ಪುಟದ ವರದಿ ನೀಡಿದ್ದೇನೆ. ನಾನು ಸುಮ್ಮನೆ ಇದ್ದರೆ ಅದು ತಪ್ಪಾಗುತ್ತದೆ. ನಾನು ನೀಡಿದ ವರದಿ ಸರಿ ಇದೆಯೋ ಇಲ್ಲವೋ ಎನ್ನುವುದಕ್ಕೆ ತನಿಖೆಯಾಗಲಿ. ಇದರಲ್ಲಿ ನನಗೆ ಏನು ವೈಯಕ್ತಿಕ ಲಾಭ ಇಲ್ಲ ಎಂದು ಅವರು ಹೇಳಿದ್ದಾರೆ.

ಏನಿದು ವಿವಾದ?
ಅಕ್ರಮ ಆಸ್ತಿ ಗಳಿಕೆ ಅರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಜಯಲಲಿತಾ ಆಪ್ತೆ ಶಶಿಕಲಾಗೆ ಪರಪ್ಪನ ಅಗ್ರಹಾರದಲ್ಲಿ ರಾಯಲ್ ಟ್ರೀಟ್‍ಮೆಂಟ್ ನೀಡಲಾಗುತ್ತಿದ್ದು, ಇದಕ್ಕಾಗಿ ಕಾರಾಗೃಹ ಮಹಾ ನಿರ್ದೇಶಕ ಸತ್ಯನಾರಾಯಣ್ ಅವರಿಗೆ 2 ಕೋಟಿ ಲಂಚ ನೀಡಿರುವ ಆರೋಪ ಕೇಳಿ ಬಂದಿದೆ.

ಲಂಚ ಪಡೆದು ಶಶಿಕಲಾಗೆ ಜೈಲಿನಲ್ಲಿ ರಾಯಲ್ ಟ್ರೀಟ್‍ಮೆಂಟ್ ನೀಡುವುದರ ಜೊತೆಗೆ ಪ್ರತ್ಯೇಕ ಅಡುಗೆ ಮನೆಯನ್ನು ನಿರ್ಮಿಸಿಕೊಡಲಾಗಿದೆ ಎಂದು ಜೈಲು ಉಪ ನಿರೀಕ್ಷಕಿ ಡಿ. ರೂಪ ಅವರು ನೀಡಿರುವ ವರದಿಯಲ್ಲಿ ಉಲ್ಲೇಖವಾಗಿದೆ. ಇಷ್ಟೇ ಅಲ್ಲದೆ ಛಾಪಾಕಾಗದ ಹಗರಣದ ಅರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿಗೆ ಸೇವೆ ಮಾಡಲು ಕೈಗೊಬ್ಬ, ಕಾಲಿಗೊಬ್ಬ ಕೈದಿಗಳನ್ನು ಇರಿಸಲಾಗಿದೆ. ಇದರ ಜೊತೆಗೆ ಜೈಲಿನಲ್ಲಿರುವ ಕೈದಿಗಳಿಗೆ ಗಾಂಜಾ ಸೇರಿದಂತೆ ಎಲ್ಲಾ ತರಹದ ಮಾದಕ ವಸ್ತುಗಳು ಸಪ್ಲೈ ಆಗುತ್ತಿದ್ದು ಜೈಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ 18 ಕೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟೀವ್ ರಿಪೋರ್ಟ್ ಬಂದಿದೆ.

ಈ ವೇಳೆ ವಿಚಾರಣಾಧೀನ ಕೈದಿಯೊರ್ವ ನರ್ಸ್ ಜೊತೆ ಅನುಚಿತ ವರ್ತನೆ ನಡೆಸಿದ್ದಾನೆ ಎನ್ನಲಾಗಿದೆ. ಜೈಲು ಉಪ ನಿರೀಕ್ಷಕಿ ರೂಪರವರು ಇದೇ ತಿಂಗಳ 10ರಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ ಬಳಿಕ ಹಿರಿಯ ಅಧಿಕಾರಿಗಳಿಗೆ ನೀಡಿರುವ ವರದಿಯಿಂದ ಈ ಎಲ್ಲಾ ಅಕ್ರಮಗಳು ಬಹಿರಂಗವಾಗಿವೆ.

ಹೀಗಾಗಿ ಇಬ್ಬರು ಅಧಿಕಾರಿಗಳು ಮಾಧ್ಯಮಗಳಿಗೆ ಏನು ಹೇಳಿದ್ದಾರೆ ಎನ್ನುವುದನ್ನು ತಿಳಿಸಲು ಇಲ್ಲಿ ವಿಡಿಯೋ ನೀಡಲಾಗಿದೆ.

 


Viewing all articles
Browse latest Browse all 80395

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>