Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80445

ರಾಜಕೀಯದಿಂದ ದೂರ ಉಳಿದು ಉತ್ತಮ ಆಡಳಿತ ನೀಡುವುದಷ್ಟೇ ನನ್ನ ಗುರಿ: ಹಾಸನ ಡಿಸಿ ರೋಹಿಣಿ ಸಿಂಧೂರಿ

$
0
0

ಹಾಸನ: ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿ ನೂತನ ಡಿಸಿಗೆ ಹೂ ಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ವೇಳೆ ಮಾತನಾಡಿದ ಅವರು, ಒಂದೊಂದು ಜಿಲ್ಲೆಯಲ್ಲಿ ಒಂದೊಂದು ರೀತಿಯ ಸಮಸ್ಯೆ ಇರಲಿದೆ. ಆ ಎಲ್ಲಾ ಸಮಸ್ಯೆಗಳನ್ನು ಮನಗಂಡು, ಪ್ರತಿಯೊಬ್ಬರಿಗೂ ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡುವುದಾಗಿ ಹೇಳಿದರು.

ಹಾಸನ ಸೂಕ್ಷ್ಮ ಜೊತೆಗೆ ರಾಜಕೀಯವಾಗಿ ಪ್ರಾಬಲ್ಯ ಹೊಂದಿರುವ ಜಿಲ್ಲೆ ಎಂದು ಕೇಳಿದ್ದೇನೆ. ಸರಿಯಾದ ರೀತಿಯಲ್ಲಿ ಕಾನೂನು ಪ್ರಕಾರ, ಜನಪರವಾದ ಆಡಳಿತ ನೀಡಿದರೆ ಯಾವುದೇ ಸಮಸ್ಯೆ ಸೃಷ್ಟಿಯಾಗದು. ರಾಜಕೀಯದಿಂದ ದೂರ ಉಳಿದು ಉತ್ತಮ ಆಡಳಿತ ನೀಡುವುದಷ್ಟೇ ನನ್ನ ಗುರಿ. ಒಳ್ಳೆಯ ಆಡಳಿತ ನೀಡಿದರೆ, ರಾಜಕೀಯದವರಿಗೂ ತಿಳಿಯಲಿದೆ ಅನ್ನೋ ವಿಶ್ವಾಸ ನನ್ನದು ಎಂದರು.

ಹಾಸನ ಜಿಲ್ಲಾಧಿಕಾರಿಯಾಗಿದ್ದ ವಿ. ಚೈತ್ರ ಅವರನ್ನು ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ರೆಸಿಡೆನ್ಸಿಯಲ್ ಎಜುಕೇಷನ್ ಇನ್‍ಸ್ಟಿಟ್ಯೂಟ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಸರ್ಕಾರ ವರ್ಗ ಮಾಡಿದೆ.

ಯಾರು ರೋಹಿಣಿ ಸಿಂಧೂರಿ?
ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ -ಆಸ್ತಿ ಅಪ್ಲಿಕೇಷನ್ ತಂದಿದ್ದರು.

ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.

ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯ ವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.

2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದಾರೆ.


Viewing all articles
Browse latest Browse all 80445

Latest Images

Trending Articles

<script src="https://jsc.adskeeper.com/r/s/rssing.com.1596347.js" async> </script>