Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80435

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಸಿಎಂ ನಾನೇ: ಡಿಕೆ ಶಿವಕುಮಾರ್

$
0
0

ನೆಲಮಂಗಲ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಂಗಳವಾರ ನೆಲಮಂಗಲ ತಾಲೂಕಿನ ಹಾಲಿಡೇ ಫಾಮ್ಸ್ ಹೋಟೆಲ್ ನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಮಾಗಡಿ ತಾಲೂಕಿನ ಜನರು ಆಸೆ ಪಟ್ಟರೆ ಹಾಗೂ ವಿಧಾನ ಸಭಾ ಚುನಾವಣೆಯಲ್ಲಿ ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕನನ್ನು ಗೆಲ್ಲಿಸಿದರೆ ಮುಂದಿನ ಸಿಎಂ ನಾನೇ ಆಗುತ್ತೇನೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್‍ಗೆ ಬಂದ ಕೇವಲ 3 ವರ್ಷದಲ್ಲಿ ಮುಖ್ಯಮಂತ್ರಿಯಾದವರು. ಆದರೂ ನನಗೆ ಮಂತ್ರಿ ಸ್ಥಾನ ಕೊಟ್ಟಿರಲಿಲ್ಲ. ನಾನು ಮಂತ್ರಿ ಸ್ಥಾನ ನೀವು ಕೊಟ್ಟಿರುವ ಪ್ರಸಾದ ಅಂತ ಕಾಯುತ್ತಿರಲಿಲ್ವ ಎಂದು ಹೇಳುವ ಮೂಲಕ ಸಿಎಂಗೆ ಡಿಕೆಶಿ ಟಾಂಗ್ ನೀಡಿದರು.

ಈ ಹಿಂದೆ ಜುಲೈ ತಿಂಗಳಿನಲ್ಲಿ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮವೊಂದರಲ್ಲಿ, ನಾನೇ ಮುಂದಿನ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ ಎಐಸಿಸಿ ಕರ್ನಾಟಕದ ಉಸ್ತುವಾರಿಯಾಗಿ ವೇಣುಗೋಪಾಲ್ ಅವರನ್ನು ನೇಮಕ ಮಾಡಿದ ಬಳಿಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ತಿಳಿಸಿದ್ದರು.


Viewing all articles
Browse latest Browse all 80435

Latest Images

Trending Articles



<script src="https://jsc.adskeeper.com/r/s/rssing.com.1596347.js" async> </script>