Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80425

ಯಡಿಯೂರಪ್ಪ, ಅಮಿತ್ ಶಾ ಜೈಲಿಗೆ ಹೋಗಿ ಬಂದವರು: ಸಿದ್ದರಾಮಯ್ಯ

$
0
0

ಬೆಳಗಾವಿ: 2018ರ ವಿಧಾನಸಭೆ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯವರು ಎಷ್ಟೆ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಅಮಿತ್ ಶಾ ಹಾಗೂ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದ ಸಮಾವೇಶದಲ್ಲಿ ಮಾತನಾಡಿದ ಅವರು, ಅಮಿತ್ ಶಾ ಅವರು ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ 50 ಸೀಟ್ ಬರುವುದಿಲ್ಲ. ಹಾಗಾಗಿ ರಾಜ್ಯದಲ್ಲಿ ಕೋಮುಗಲಭೆ ಎಬ್ಬಿಸಿ ಅಂತಾ ಹೇಳಿ ಹೋಗಿದ್ದಾರೆ. ನಮ್ಮ ವಿರುದ್ಧ ಚಾರ್ಜ್ ಸೀಟ್ ಹಾಕಲು ಹೊರಟಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದೆಯಾ..? ನಾವು 4 ವರ್ಷ 4 ತಿಂಗಳ ಅವಧಿಯಲ್ಲಿ ಒಂದೇ ಒಂದು ಹಗರಣ ಮಾಡಿಲ್ಲ. ನೀಡಿದ 165 ಭರವಸೆಯಲ್ಲಿ 155 ಭರವಸೆ ಈಡೇರಿಸಿದ್ದೇವೆ ಎಂದು ಹೇಳಿದರು.

ಈ ಬಾರಿ ಗ್ರಾಮೀಣ ಮತಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲುವು ಖಚಿತ. ಅಭಿಪ್ರಾಯಕ್ಕೆ ಮನ್ನಣೆ ನೀಡಿ ಅವರಿಗೆ ಟಿಕೆಟ್ ನೀಡುತ್ತೇವೆ. ಕಳೆದ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೆಲವೇ ಮತಗಳ ಅಂತರದಿಂದ ಸೋಲು ಕಂಡಿದ್ದರು. ಮುಂದಿನ ಬಾರಿ 20 ಸಾವಿರ ಮತಗಳ ಅಂತರದ ಗೆಲ್ಲಿಸಿ ನಿಮಗೆ ಕೋಟಿ ನಮಸ್ಕಾರ ಹೊಡೆಯುತ್ತೇನೆ. ಸೋತರು ಅವರು ಕ್ಷೇತ್ರದ ಸಂಪರ್ಕ ಕಳೆದುಕೊಂಡಿಲ್ಲ. ನಾವೆಲ್ಲಾ ಲಕ್ಷ್ಮೀ ಹೆಬ್ಬಾಳ್ಕರ್‍ಗೆ ನಿಮ್ಮ ಬೆಂಬಲ ಕೋರಲು ಬಂದಿದ್ದೇನೆ ಎಂದು ತಿಳಿಸಿದರು.


Viewing all articles
Browse latest Browse all 80425


<script src="https://jsc.adskeeper.com/r/s/rssing.com.1596347.js" async> </script>