Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80515

ಒಂದಂಕಿ ಲಾಟರಿ ಹಗರಣ; ಸಿಬಿಐನಿಂದ ಕೆಂಪಯ್ಯ, ಡಿಜಿ ಓಂಪ್ರಕಾಶ್ ಡ್ರಿಲ್ಲಿಂಗ್

$
0
0

ನವದೆಹಲಿ: ರಾಜ್ಯದಲ್ಲಿ ನಡೆದ ಬಹುಕೋಟಿ ಒಂದಂಕಿ ಲಾಟರಿ ಪ್ರಕರಣಕ್ಕೆ ಸಂಬಂಧ ರಾಜ್ಯದ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಹಾಗೂ ಗೃಹಸಚಿವರ ಸಲಹೆಗಾರ ಕೆಂಪಯ್ಯರನ್ನು ಇವತ್ತು ಸಿಬಿಐ ತೀವ್ರ ವಿಚಾರಣೆಗೆ ಒಳಪಡಿಸಿದೆ.

ನವದೆಹಲಿಯ ಸಿಬಿಐ ಮುಖ್ಯ ಕಚೇರಿಯಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ತನಕ ವಿಚಾರಣೆ ನಡೆದಿದೆ. ಇಬ್ಬರನ್ನು ಪ್ರತ್ಯೇಕ ಕೊಠಡಿಗಳಲ್ಲಿ ವಿಚಾರಣೆಗೆ ಒಳಪಡಿಸಿರುವ ಸಿಬಿಐ ಅಧಿಕಾರಿಗಳು ಸುಮಾರು 50 ರಿಂದ 60 ಪ್ರಶ್ನೆಗಳಿಗೆ ಮಾಹಿತಿ ಕಲೆಹಾಕಿದ್ದಾರೆ ಎನ್ನಲಾಗಿದೆ.

ಕರ್ನಾಟಕ ಲಾಟರಿ ಘಟಕದ ಅಂದಿನ ಮುಖ್ಯಸ್ಥರಾದ ಪದ್ಮನಯನ ಅವರು ತಾವು ಒತ್ತಡ ಮೇಲೆ ದೂರು ದಾಖಲಿಸಿರುವುದಾಗಿ ಹೇಳಿದ್ದರು. ಅಲ್ಲದೇ ಒತ್ತಡ ಹೇರಿದ್ದ ಅಧಿಕಾರಿಗಳು ಮತ್ತು ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರು ಒತ್ತಡ ಹೇರಿದ್ದರು ಎಂದು ಸಿಬಿಐನಲ್ಲಿ ದೂರಿದ್ದರು. ಈ ಹಿನ್ನಲೆಯಲ್ಲಿ ಡಿಜಿಪಿ ಓಂಪ್ರಕಾಶ್, ಕೆಂಪಯ್ಯ ಅವರನ್ನು ಅಧಿಕಾರಿಗಳು ಇವತ್ತು ವಿಚಾರಣೆಗೆ ಒಳಪಡಿಸಿದರು.

ಒಂದಂಕಿ ಲಾಟರಿ ಹಗರಣ ಮಾಧ್ಯಮಗಳಲ್ಲಿ ಬಿತ್ತರಗೊಂಡ ಬಳಿಕ ಸಿಬಿಐ ತನಿಖೆಗೆ ವಹಿಸಲಾಗಿತ್ತು. ಅದರಂತೆ ಪ್ರಕರಣ ದಾಖಲಿಸಲಾಗಿದೆ ನಾವು ಯಾರ ಮೇಲೂ ಒತ್ತಡ ಹೇರಿಲ್ಲ ಎಂದು ಈ ಮೂವರು ಅಧಿಕಾರಿಗಳು ಹೇಳಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇದಕ್ಕೂ ಮೊದಲು 0 ದಿನಗಳ ಹಿಂದೆ ಬೆಂಗಳೂರು ಪೊಲೀಸ್ ಆಯುಕ್ತ ಮೇಘರಿಕ್ ಅವರು ಕೂಡ ಹೇಳಿಕೆ ದಾಖಲಿಸಿದ್ದರು. ಒಂದಂಕಿ ಲಾಟರಿ ಪ್ರಕರಣದ ಪ್ರಮುಖ ಕಿಂಗ್ ಪಿನ್ ಪಾರಿರಾಜನ್ ಜೊತೆ ಪೊಲೀಸ್ ಅಧಿಕಾರಿಗಳು ನಿಕಟ ಸಂಬಂಧ ಹೊಂದಿದ್ದ ಆರೋಪದ ಮೇಲೆ ಐಜಿಪಿ ಅಲೋಕ್‍ಕುಮಾರ್ ಸೇರಿದಂತೆ 20ಕ್ಕೂ ಹೆಚ್ಚು ಅಧಿಕಾರಿಗಳನ್ನು ಸಿಬಿಐ ವಿಚಾರಣೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.

 

The post ಒಂದಂಕಿ ಲಾಟರಿ ಹಗರಣ; ಸಿಬಿಐನಿಂದ ಕೆಂಪಯ್ಯ, ಡಿಜಿ ಓಂಪ್ರಕಾಶ್ ಡ್ರಿಲ್ಲಿಂಗ್ appeared first on Kannada Public tv.


Viewing all articles
Browse latest Browse all 80515

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>