Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80332

ಮೈಮುಲ್‌ ಚುನಾವಣೆಯಲ್ಲಿ ಜಿಟಿಡಿ ಬಣಕ್ಕೆ ಭರ್ಜರಿ ಗೆಲುವು

$
0
0

– 12 ಸ್ಥಾನ ಜಿಟಿಡಿ ಬಣಕ್ಕೆ, 3 ಸ್ಥಾನ ಎಚ್‌ಡಿಕೆ ಬಣಕ್ಕೆ
– ಹಾಲಿ ಅಧ್ಯಕ್ಷರಿಗೆ ಸೋಲು

ಮೈಸೂರು: ಪ್ರತಿಷ್ಠೆಯ ಕಾಳಗವಾಗಿದ್ದ ಮೈಮೂಲ್‌(ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ) ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಣಕ್ಕೆ ಹಿನ್ನಡೆಯಾಗಿದ್ದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ಸಾಧಿಸಿದೆ.

ಒಟ್ಟು 15 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಜಿಟಿಡಿ ಬಣ ಗೆದ್ದರೆ 3 ಸ್ಥಾನಗಳಿಗೆ ಹೆಚ್‌ಡಿಕೆ ಬಣ ಸಮಾಧಾನ ಪಟ್ಟುಕೊಂಡಿದೆ. ಆದರೆ ಅಧ್ಯಕ್ಷ ಸ್ಥಾನ ಎಚ್‌ಡಿಕೆ ಬಣದ ಪಾಲಾಗಿದೆ. ಹಾಲಿ ಅಧ್ಯಕ್ಷ ಜಿಟಿಡಿ ಆಪ್ತ ಮಾವನಹಳ್ಳಿ ಸಿದ್ದೇಗೌಡ ಅವರಿಗೆ ಸೋಲಾಗಿದೆ.

ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆದ್ದಿದ್ದು, ಮಾಜಿ ಸಚಿವ ಎಚ್.ಡಿ.ರೇವಣ್ಣ ಸಂಬಂಧಿ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರನಿಗೆ ಸೋಲಾಗಿದೆ. ಎಚ್.ಡಿ‌.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಪ್ರಸನ್ನ ಗೆದ್ದಿದ್ದಾರೆ.

ಜಿಟಿಡಿ ಹಾಗೂ ಮಾಜಿ ಕುಮಾರಸ್ವಾಮಿಗೆ ಪ್ರತಿಷ್ಠೆಯಯಾಗಿದ್ದ ಈ ಚುನಾವಣೆಯ ಒಟ್ಟು 1,052 ಮತದಾರರ ಪೈಕಿ 1,051 ಸದಸ್ಯರು ಮತದಾನ ಮಾಡಿದ್ದರು.

 

ಪರಾಜಿತ ಅಭ್ಯರ್ಥಿ ಕೆ.ಎಸ್.‌ಮಧುಚಂದ್ರ ಪ್ರತಿಕ್ರಿಯಿಸಿ, ನಾವು ಪೂರ್ವಭಾವಿ ಸಿದ್ದತೆ ಇಲ್ಲದೆ ಚುನಾವಣೆ ಹೋಗಿದ್ದೇವು. ಜಿ.ಟಿ.ದೇವೇಗೌಡರು ಮೈಸೂರು ಸಹಕಾರಿ ಧುರೀಣ ಎಂಬುದು ಸಾಬೀತಾಗಿದೆ. ಇದು ಜೆಡಿಎಸ್‌ ಪಕ್ಷದ ಸೋಲಲ್ಲ. ಇದು ನನ್ನ ವೈಯುಕ್ತಿಕ ಸೋಲು. ರೇವಣ್ಣರವರು ನನ್ನ ಬಾವ ಇರಬಹುದು. ಪಕ್ಷದ ಮುಖಂಡರಾಗಿ ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ‌. ಹುಣಸೂರು ವಿಭಾಗದಲ್ಲಿ ನಮ್ಮ ಬಣದವರು ಯಾರು ಗೆದ್ದಿಲ್ಲ ಎಂದು ತಿಳಿಸಿದರು.


Viewing all articles
Browse latest Browse all 80332

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>