Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80365

ಸಾವಿರದ ಗಡಿ ದಾಟಿದ ದಿನದ ಕೊರೊನಾ ಕೇಸ್- 1,135 ಪ್ರಕರಣ ಪತ್ತೆ

$
0
0

– ಬೆಂಗಳೂರಲ್ಲೇ 710 ಕೇಸ್, ರಾಜ್ಯದಲ್ಲಿ 6 ಬಲಿ
– ನಾಲ್ಕೈದು ತಿಂಗಳ ಬಳಿಕ ಮತ್ತೆ ಸಾವಿರ ದಾಟಿದ ದಿನದ ಸೋಂಕಿತರ ಸಂಖ್ಯೆ

ಬೆಂಗಳೂರು: ಇಂದು ರಾಜ್ಯದಲ್ಲಿ 1,135 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 561 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 6 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,403ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿತರ ಸಂಖ್ಯೆ 9,62,339ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 9,428 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 129 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಮೂಲಕ ನಾಲ್ಕೈದು ತಿಂಗಳ ಬಳಿಕ ಸೋಂಕಿತರ ಸಂಖ್ಯೆ ಮತ್ತೆ ಸಾವಿರದ ಗಡಿ ದಾಟಿದೆ.

ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.65 ಮತ್ತು ಮರಣ ಪ್ರಮಾಣ ಶೇ.0.52ರಷ್ಟು ದಾಖಲಾಗಿದೆ. ಇಂದು 68,469 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 82,038 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 6, ಬಳ್ಳಾರಿ 9, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 38, ಬೆಂಗಳೂರು ನಗರ 710, ಬೀದರ್ 32, ಚಾಮರಾಜನಗರ 0, ಚಿಕ್ಕಬಳ್ಳಾಪುರ 14, ಚಿಕ್ಕಮಗಳೂರು 2, ಚಿತ್ರದುರ್ಗ 11, ದಕ್ಷಿಣ ಕನ್ನಡ 50, ದಾವಣಗೆರೆ 7, ಧಾರವಾಡ 7, ಗದಗ 4, ಹಾಸನ 15, ಹಾವೇರಿ 0, ಕಲಬುರಗಿ 46, ಕೊಡಗು 2, ಕೋಲಾರ 6, ಕೊಪ್ಪಳ 2, ಮಂಡ್ಯ 6, ಮೈಸೂರು 58, ರಾಯಚೂರು 7, ರಾಮನಗರ 1, ಶಿವಮೊಗ್ಗ 5, ತುಮಕೂರು 32, ಉಡುಪಿ 32, ಉತ್ತರ ಕನ್ನಡ 5, ವಿಜಯಪುರ 13 ಮತ್ತು ಯಾದಗಿರಿಯಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.


Viewing all articles
Browse latest Browse all 80365

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>