– ಬಿಜೆಪಿ ಯುವಮೋರ್ಚಾ ವತಿಯಿಂದ “ಭಾರತಕ್ಕಾಗಿ ಓಟ”
ಬೆಂಗಳೂರು: ದೇಶದಾದ್ಯಂತ 70ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಸ್ವತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಮತ್ತು ಮಾಹಿತಿ ತಂತ್ರಜ್ಞಾನ ಪ್ರಕೋಷ್ಟ ವತಿಯಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ “ಭಾರತಕ್ಕಾಗಿ ಓಟ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಶೋಭಾಕರಂದ್ಲಾಜೆ, ಸಂಸದ ಪ್ರತಾಪಸಿಂಹ, ಪಿ.ಸಿ.ಮೋಹನ್, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಶಾಸಕ ಅಶ್ವಥ್ ನಾರಾಯಣ ಸೇರಿದಂತೆ ಹಲವು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ರಾತ್ರಿ 12 ಗಂಟೆಗೆ ಸರಿಯಾಗಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ನೆರೆದಿದ್ದ ಜನರು ಜಯಘೋಷ ಕೂಗಿ ಸಂಭ್ರಮಿಸಿದ್ರು.
ಬಳಿಕ ಕೆ.ಆರ್.ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್, ಗಾಂಧೀನಗರ, ಮೌರ್ಯ ವೃತ್ತ ಮಾರ್ಗವಾಗಿ ಸಾಗಿದ ಮ್ಯಾರಥಾನ್ ಮತ್ತೆ ಫ್ರೀಡಂ ಪಾರ್ಕ್‍ನಲ್ಲಿ ಅಂತ್ಯಗೊಳ್ತು. ಸಾವಿರಾರು ಸಾರ್ವಜನಿಕರು, ವಿದ್ಯಾರ್ಥಿಗಳು ಮ್ಯಾರಥಾನ್‍ನಲ್ಲಿ ಪಾಲ್ಗೊಂಡಿದ್ರು.
ನಗರದ ಬನ್ನಪ್ಪ ಬನ್ನಪ್ಪ ಪಾರ್ಕ್‍ನಲ್ಲಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯ್ತು. ಕಾರ್ಯಕ್ರಮದಲ್ಲಿ ಸಂಸದ ಅನಂತಕುಮಾರ ಹೆಗಡೆ ಧ್ವಜಾರೋಹಣ ನೆರವೇರಿಸಿದರು.
The post ಫ್ರೀಡಂ@12: ಮಧ್ಯರಾತ್ರಿ 12ಕ್ಕೆ ಧ್ವಜಾರೋಹಣ ಮಾಡಿದ ಬಿಎಸ್‍ವೈ appeared first on Kannada Public tv.