ಬೆಂಗಳೂರು: ಮರಳು ಲಾರಿಯೊಂದು ಜಲ್ಲಿ ತುಂಬಿದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ.
ಔಟರ್‍ರಿಂಗ್ ರೋಡ್‍ನಲ್ಲಿ ಅತಿ ವೇಗವಾಗಿ ಚಲಿಸುತ್ತಾ ಕೆಎ 41, 2561 ನಂಬರಿನ ಲಾರಿ ಬ್ರೇಕ್ ಫೇಲ್ ಆದ ಕಾರಣ ನಿಯಂತ್ರಣ ತಪ್ಪಿ ಮುಂಬದಿಯ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಹಿಂಬದಿಯಲ್ಲಿ ಬರುತ್ತಿದ್ದ 2 ಕಾರು, ಟಾಟಾ ಏಸ್, 2 ಬೈಕ್‍ಗಳಿಗೂ ಡಿಕ್ಕಿ ಹೊಡೆದು ನಂತರ ಬಸ್ ಸ್ಟಾಂಡ್‍ಗೆ ನುಗ್ಗಿದೆ.
ಲಾರಿ ನುಜ್ಜುಗುಜ್ಜಾದ ಪರಿಣಾಮ ಲಾರಿಯೊಳಗಿದ್ದ ಕ್ಲೀನರ್ ಸಾವನಪ್ಪಿದ್ರೆ, ಚಾಲಕ ಸೇರಿದಂತೆ ಒಟ್ಟು ಮೂರು ಜನರ ಕಾಲು ತುಂಡಾಗಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ.
ಕಾರು ಮತ್ತು ಆಟೋಗಳು ಲಾರಿಗೆ ಡಿಕ್ಕಿ ಹೊಡೆದು ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 6 ಜನರಿಗೆ ಗಾಯವಾಗಿದೆ ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿರೋ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
The post ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಓರ್ವ ಸಾವು, ಮೂವರ ಕಾಲು ಕಟ್ appeared first on Kannada Public tv.