Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80405

ರಾಜ್ಯದಲ್ಲಿ 478 ಹೊಸ ಪ್ರಕರಣ –ಸಾವು 17

$
0
0

ಬೆಂಗಳೂರು: ಕಳೆದ ವಾರಕ್ಕಿಂತ ಇಂದು ರಾಜ್ಯದಲ್ಲಿ ಕೇಸ್ ಸಂಖ್ಯೆ ಹೆಚ್ಚಾಗಿದ್ದು, 478 ಹೊಸ ಪ್ರಕರಣಗಳು ದಾಖಲಾಗಿದೆ. 17 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರದಲ್ಲಿ 235 ಜನರಿಗೆ ಪಾಸಿಟಿವ್ ವರದಿಯಾಗಿದ್ದು, 161 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡು, 7 ಮರಣ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ 334 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 8,557 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ಒಟ್ಟು 29,87,313 ಜನರಿಗೆ ಕೊರೊನಾ ಬಂದಿದೆ. 29,40,673 ಜನರು ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ 3.55% ರಷ್ಟಿದ್ದರೆ, ಪಾಸಿಟಿವಿಟಿ ರೇಟ್ 0.42% ರಷ್ಟಿದೆ. ಇದನ್ನೂ ಓದಿ: ಗಿಣಿರಾಮನ ರಾಣಿಗೆ ಮೋಹಕ ತಾರೆ ಕೊಟ್ರು ಕಾಂಪ್ಲಿಮೆಂಟ್

ಇಂದು ರಾಜ್ಯದಲ್ಲಿ ಒಟ್ಟು 6,47,28,431 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,13,152 ಸ್ಯಾಂಪಲ್ (ಆರ್‌ಟಿಪಿಸಿಆರ್ 91,136+ 22,016 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಳ್ಳಾರಿ 1, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 235, ಚಾಮರಾಜನಗರ 3, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 4, ಚಿತ್ರದುರ್ಗ 5, ದಕ್ಷಿಣ ಕನ್ನಡ 31, ದಾವಣಗೆರೆ 1, ಹಾಸನ 24, ಕಲಬುರಗಿ 1, ಕೊಡಗು 29, ಮಂಡ್ಯ 10, ಮೈಸೂರು 47, ರಾಮನಗರ 1, ಶಿವಮೊಗ್ಗ 9, ತುಮಕೂರು 53, ಉಡುಪಿ 8, ಉತ್ತರ ಕನ್ನಡ 11, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು ವಿಜಯಪುರ, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಸಿಲಿಗೆ ತಲೆ ಸುತ್ತಿ ಬಿದ್ದ ವಿದ್ಯಾರ್ಥಿಗಳು – ಹಾಡಿಗೆ ನೃತ್ಯ ಮಾಡಿದ ಅಧಿಕಾರಿಗಳು

The post ರಾಜ್ಯದಲ್ಲಿ 478 ಹೊಸ ಪ್ರಕರಣ – ಸಾವು 17 appeared first on Public TV.


Viewing all articles
Browse latest Browse all 80405

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>