
ಬೆಳಗಾವಿ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿಗೊಂಡ ಬಳಿಕ ಬೈಕ್ ಸವಾರನನ್ನು ಕಾಲಿನಿಂದ ಒದ್ದು ಹಲ್ಲೆ ನಡೆಸಿ ಕೊಂದ ಅಮಾಯಕ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪಟ್ಟಣದ ಚೌಕಿ ಕ್ರಾಸ್ ಬಳಿ ನಡೆದಿದೆ.
ವಿಜಯ ಮಹಾಂತೇಶ್ ಹಿರೇಮಠ್ (67) ಬೈಕ್‍ನಲ್ಲಿ ಸಂಚರಿಸುತ್ತಿದ್ದಾಗ ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆಯುತ್ತಿದ್ದಂತೆ ಪಾದಚಾರಿಗೆ ಹೋಗಿ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಡಿಕ್ಕಿ ಹೊಡೆದರಿಂದ ಆಕ್ರೋಶಗೊಂಡ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದ ಅದೃಶ್ಯ ಎಂಬಾತ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲೂ ಸಾಧ್ಯವಾಗದಷ್ಟು ಸರ್ಕಾರ ದಿವಾಳಿಯಾಗಿದೆಯೇ? – ಎಎಪಿ ಪ್ರಶ್ನೆ
ಹಲ್ಲೆಯಿಂದ ಗಾಯಗೊಂಡ ಮಹಾಂತೇಶ್ ಸ್ಥಳದಲ್ಲೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಕಿತ್ತೂರು ಪೊಲೀಸರು ಹಲ್ಲೆ ನಡೆಸಿದ ಅದೃಶ್ಯನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. ಈ ಕುರಿತು ಕಿತ್ತೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪಟಾಕಿ ನಿಷೇಧಿಸಿದರೆ ನಿರ್ದಿಷ್ಟ ಸಮುದಾಯ ವಿರೋಧಿ ಎಂದರ್ಥವಲ್ಲ- ಸುಪ್ರೀಂ ಕೋರ್ಟ್
The post ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿ – ಸವಾರನನ್ನು ಒದ್ದು ಕೊಂದ ಕಿರಾತಕ appeared first on Public TV.