
ಚೆನ್ನೈ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಠಾತ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೌದು. ರಜನಿಕಾಂತ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಚೆನ್ನೈನ ಅಲ್ವಾರ್ ಪೇಟ್‍ನಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಜನಿಕಾಂತ್ ಅವರು ಫುಲ್ ಬಾಡಿ ಚೆಕಪ್ ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ. ಒಂದು ದಿನ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ. ಸದ್ಯ ಅವರು ಆರೋಗ್ಯವಾಗಿದ್ದು, ಅಭಿಮಾನಿಗಳು ಆತಂಕ ಪಡಬೇಡಿ ಎಂದು ಲತಾ ರಜನಿಕಾಂತ್ ಮನವಿ ಮಾಡಿದ್ದಾರೆ.
Actor Rajinikanth has been admitted to Kauvery Hospital in Chennai, says the hospital. pic.twitter.com/ONK6w0icrt
— ANI (@ANI) October 28, 2021
ಇದು ಸಾಮಾನ್ಯವಾಗಿ ನಿಯಮಿತ ಮಧ್ಯಂತರದಲ್ಲಿ ಮಾಡಲಾಗುವ ವೈದ್ಯಕೀಯ ಪರೀಕ್ಷೆಯಾಗಿದೆ. ಆದ್ದರಿಂದ ಅವರನ್ನು ಈಗ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ದಾಖಲಿಸಲಾಗಿದೆ ಎಂದು ನಟನ ಆಪ್ತರು ತಿಳಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತ ಬಿಎಂಟಿಸಿ ಬಸ್ ಡ್ರೈವರ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಅರ್ಪಿಸಿದ ರಜನಿಕಾಂತ್
#UPDATE | Actor Rajinikanth went for a health check-up at Kauvery Hospital in Chennai. Currently, he is admitted to the hospital.
— ANI (@ANI) October 28, 2021
ಅಕ್ಟೋಬರ್ 25ರಂದು ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 70 ವರ್ಷದ ರಜನಿಕಾಂತ್ ಅವರಿಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು 2019ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಇದನ್ನೂ ಓದಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ರಜನಿಕಾಂತ್
The post ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು appeared first on Public TV.