ಶ್ರೀನಗರ: ಜಮ್ಮು ಕಾಶ್ಮೀರ ಹಂದ್ವಾರ ನಗರದಲ್ಲಿ ಯೋಧನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳವಾಗಿದೆ ಎಂದು ಆರೋಪಿಸಿದ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಪ್ರತಿಭಟನೆಯಲ್ಲಿ ಮೂವರು ಮೃತಪಟ್ಟಿದ್ದು ಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಪ್ರಥಮ ಪಿಯುಸಿ ಓದುತ್ತಿದ್ದ ಯುವತಿಯೊಬ್ಬಳಿಗೆ ಸೈನಿಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆಂದು ಆರೋಪಿಸಿ ಹಂದ್ವಾರದಲ್ಲಿ ಗುಂಪೊಂದು ಮಂಗಳವಾರ ಪ್ರತಿಭಟನೆ ನಡೆಸುತಿತ್ತು. ಈ ವೇಳೆ ಪ್ರತಿಭಟನಾಕಾರರು ಸೈನಿಕರ ಮೇಲೆ ಕಲ್ಲು ತೂರಾಟ ಮಾಡಿದ್ದರು.
ಕಲ್ಲು ತೂರಾಟ ನಡೆಸಿದ್ದಕ್ಕೆ ಸೈನಿಕರು ಫೈರಿಂಗ್ ನಡೆಸಿದ್ದಾರೆ. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, 75ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೀಗ ಘಟನೆ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಹಂದ್ವಾರಾ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
19 ವರ್ಷದ ಒಳಗಿನ ಜಮ್ಮು ತಂಡದ ಸದಸ್ಯ ನಮೀಮ್ ಬಟ್ ಮತ್ತು ಇಕ್ಬಲ್ ಅಹ್ಮದ್ ಮಂಗಳವಾರ ಮೃತಪಟ್ಟಿದ್ದರೆ, 70 ವರ್ಷ ವಯಸ್ಸಿನ ಮಹಿಳೆಯೊಬ್ಬರು ಇಂದು ಮೃತಪಟ್ಟಿದ್ದಾರೆ.
The post ಸೈನಿಕನಿಂದ ಲೈಂಗಿಕ ಕಿರುಕುಳ: ಕಾಶ್ಮೀರದ ಹಂದ್ವಾರ ನಗರ ಉದ್ವಿಗ್ನ appeared first on Public TV.