ಮಂಡ್ಯ: ನಮಗೆ ಸ್ವಾತಂತ್ರ್ಯ ಬರಲು ಕಾಂಗ್ರೆಸ್ ಕಾರಣ. ಬಿಜೆಪಿ, ಆರ್‍ಎಸ್‍ಎಸ್‍ನವರು ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ. ಅವರು ಬ್ರಿಟೀಷರ ಜೊತೆ ಸೇರಿಕೊಂಡಿದ್ರು ಎಂದು ಮಾಜಿ ಸಂಸದೆ ರಮ್ಯಾ ವಿವಾದಾತ್ಮಕ ಹೇಳಿಕೆಯನ್ನು ಹೇಳಿದ್ದಾರೆ.
ಮಂಡ್ಯದಲ್ಲಿ ಎನ್‍ಎಸ್‍ಯುಐ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳ ನಡೆ ದೇಶದ ಕಡೆ ಎಂಬ ಜಾಥ ಹಮ್ಮಿಕೊಂಡಿತ್ತು. ಈ ಜಾಥಾದಲ್ಲಿ ವಿದ್ಯಾರ್ಥಿಗಳು ಸುಮಾರು ಒಂದು ಕಿಲೋಮೀಟರ್ ಉದ್ದದ ರಾಷ್ಟ್ರಧ್ವಜ ಹಿಡಿದು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವೇಳೆ ಮಾತನಾಡಿದ ರಮ್ಯಾ, ಬಿಜೆಪಿ, ಆರ್‍ಎಸ್‍ಎಸ್‍ನವರು ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ. ಅವರು ಬ್ರಿಟೀಷರ ಜೊತೆ ಸೇರಿಕೊಂಡಿದ್ರು ಎಂಬ ಹೇಳಿಕೆ ನೀಡಿ ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬಿಜೆಪಿ ಖಂಡನೆ: ರಮ್ಯಾ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿರುವ ಮಂಡ್ಯ ಬಿಜೆಪಿ ಕಾರ್ಯಕರ್ತರು ರಮ್ಯಾ ಅವರಿಗೆ ಅರೆಹುಚ್ಚು ಹಿಡಿದಿದೆ. ಕೂಡಲೇ ಕಾಂಗ್ರೆಸ್‍ನವರು ರಮ್ಯಾ ಅವರಿಗೆ ಬುದ್ಧಿ ಹೇಳಿ ಅವರಿಗೆ ಚಿಕಿತ್ಸೆ ಕೊಡಿಸಬೇಕು. ಜೊತೆಗೆ ತಾವು ನೀಡಿರುವ ಹೇಳಿಕೆಯನ್ನ ಹಿಂಪಡೆಯುವಂತೆ ಸೂಚಿಸಬೇಕು. ಇಲ್ಲದಿದ್ರೆ ರಮ್ಯಾ ವಿರುದ್ಧ ಉಗ್ರ ಹೋರಾಟ ಮಾಡೋದಾಗಿ ಬಿಜೆಪಿ ಮುಖಂಡ ಸಿಟಿ.ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.
https://twitter.com/divyaspandana/status/770569795645214720
The post ಬ್ರಿಟೀಷರ ಜೊತೆ ಬಿಜೆಪಿ, ಆರ್‍ಎಸ್‍ಎಸ್‍ನವರು ಸೇರಿಕೊಂಡಿದ್ರು: ರಮ್ಯಾ appeared first on Kannada Public tv.