ನವದೆಹಲಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗೆ ಬ್ರೇಕ್ ಬಿದ್ದಿದ್ದು, ಅಧ್ಯಕ್ಷ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. ಮಾನದಂಡದೊಂದಿಗೆ ಹೊಸಪಟ್ಟಿ ಸಿದ್ಧಪಡಿಸುವಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ.
ಇಂದು ದೆಹಲಿಯಲ್ಲಿ ರಾಹುಲ್‍ಗಾಂಧಿಯವರನ್ನ ಭೇಟಿಯಾಗಿದ್ದ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಿಗಮ ಮಂಡಳಿ ಅಧ್ಯಕ್ಷ ಗಾದಿ ಬಗ್ಗೆ ಚರ್ಚೆ ನಡೆಸಿದ್ರು.
ಭೇಟಿ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೊಸ ಪಟ್ಟಿ ರಚಿಸುವಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿ ಸೂಚಿಸಿದ್ದಾರೆ. ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿಯಲ್ಲಿ ಮಾನದಂಡ ನಿಗದಿ ಪಡಿಸಲು ಸೂಚನೆ ನೀಡಿದ್ದಾರೆ. ಅದರಂತೆ ಚರ್ಚಿಸಿ ಹೊಸ ಪಟ್ಟಿ ಸಿದ್ಧಪಡಿಸಿ ಮತ್ತೆ ಹೈಕಮಾಂಡ್ ಭೇಟಿಯಾಗಿ ಒಪ್ಪಿಗೆ ಪಡೆಯಲಾಗುವುದು ಅಂತಾ ತಿಳಿಸಿದ್ರು.
ಸಂಪುಟಕ್ಕೆ ಕೆಜೆ ಜಾರ್ಜ್ ಅವರನ್ನ ಸೇರಿಸಿಕೊಳ್ಳುವ ಬಗ್ಗೆ ಚರ್ಚೆಯಾಗಿಲ್ಲ ಅಂತಾ ಸಿಎಂ ತಿಳಿಸಿದ್ರು.
The post ನಿಗಮ ಮಂಡಳಿ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ; ನೇಮಕಾತಿ ಮಾನದಂಡಕ್ಕೆ ರಾಹುಲ್ ಸೂಚನೆ appeared first on Kannada Public tv.