ಬೆಂಗಳೂರು: ಇಂದು ಕಾವೇರಿ ಮರುಪರಿಶೀಲನಾ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ತಮಿಳುನಾಡಿಗೆ ಸೆಪ್ಟೆಂಬರ್ 20ರವರೆಗೆ 12 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮತ್ತೆ ಕಾವೇರಿ ಕಿಚ್ಚು ಪ್ರಾರಂಭವಾಗಿದೆ.
ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಕರವೇ ಹಾಗೂ ಜಯಕರ್ನಾಟಕ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ತಮಿಳುನಾಡು ಲಾರಿಯ ಗಾಜು ಪುಡಿ ಪುಡಿ ಮಾಡಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಸೆಪ್ಟೆಂಬರ್ 15ರವರೆಗೆ ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಆದೇಶಿಸಿದ್ದ ಸುಪ್ರೀಂ ಕೋರ್ಟ್ ಈಗ ಸೆ. 20ರವರೆಗೆ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದೆ.
The post ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಮತ್ತೆ ಕಾವೇರಿ ಕಿಚ್ಚು appeared first on Kannada Public tv.