Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80435

ರಾಜೀನಾಮೆ ಪತ್ರ ವೈರಲ್-‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದೇನು?

$
0
0

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕೆ. ಸುಧಾಕರ್‌ (K sudhakar) ಗೆಲುವಿನ ಬೆನ್ನಲ್ಲೇ ಶಾಸಕ ಪ್ರದೀಪ್ ಈಶ್ವರ್ ಹೆಸರಿನ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಸಂಬಂಧ ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ.

ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಇದೊಂದು ನಕಲಿ ಪತ್ರ. ಆ ಪತ್ರಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಕಿಡಿಗೇಡಿಗಳು ನಕಲಿ ರಾಜೀನಾಮೆ ಪತ್ರ ಹರಿಬಿಟ್ಟಿದ್ದಾರೆ. ಈ ಬಗ್ಗೆ ನಾನು ಕಾನೂನು ರೀತಿಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ರಾಜೀನಾಮೆ ನೀಡ್ತೀನಿ ಅಂದಿದ್ದ ಶಾಸಕರು: ಚಿಕ್ಕಬಳ್ಳಾಪುರ (Chikkaballapur) ಲೋಕಸಭಾ ಚುನಾವಣಾ ಪ್ರಚಾರದ ವೇಳೆ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ ಒಂದು ಮತ ಹೆಚ್ಚಿಗೆ ಲೀಡ್ ಪಡೆದರೆ ನಾನು ರಾಜೀನಾಮೆ ನೀಡುವುದಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಜೊತೆಯಲ್ಲಿ ಇದನ್ನ ಮಾಜಿ ಸಚಿವ ಡಾಕ್ಟರ್ ಕೆ ಸುಧಾಕರ್ ಸವಾಲಾಗಿ ಸ್ವೀಕರಿಸಬೇಕು ಎಂಬ ಆಗ್ರಹವನ್ನು ಕೂಡ ಮಾಡಿದ್ದರು. ಆದರೆ ಪ್ರದೀಪ್ ಈಶ್ವರ್ ಸವಾಲಿಗೆ ಡಾಕ್ಟರ್ ಕೆ ಸುಧಾಕರ್ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಇದನ್ನೂ ಓದಿ: ಎರಡಂಕಿ ಫಲಿತಾಂಶ ಬರದಿರಲು ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ – ಸತೀಶ್ ಜಾರಕಿಹೊಳಿ

ಇತ್ತ ಕೆಲವು ಕಡೆ ಪ್ರದೀಪ್ ಈಶ್ವರ್ (Pradeep Eshwar) ತಮ್ಮ ಹಳೆಯ ಹೇಳಿಕೆಯನ್ನೇ ಮರು ಉಚ್ಚರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಹೇಳಿಕೆಯನ್ನು ಸಹ ಕೊಟ್ಟಿದ್ದರು. ಮಂಗಳವಾರ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಂತರ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾಕ್ಟರ್ ಕೆ ಸುಧಾಕರ್ 20,941 ಮತಗಳ ಅಂತರವನ್ನು ಕಾಯ್ದುಕೊಂಡಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಕೊಡಬೇಕು ಅಂತ ಹಲವರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಇಂದು ನಕಲಿ ರಾಜೀನಾಮೆ ಪತ್ರವೊಂದು ಸಾಕಷ್ಟು ವೈರಲ್ ಆಗಿ ಚರ್ಚೆಗೀಡಾಗಿದೆ.


Viewing all articles
Browse latest Browse all 80435


<script src="https://jsc.adskeeper.com/r/s/rssing.com.1596347.js" async> </script>