– ಸುದ್ದಿಗೋಷ್ಠಿಯಲ್ಲಿ ಪರಮೇಶ್ವರ್ ಹೇಳಿಕೆ
ಬೆಂಗಳೂರು: ಕಾವೇರಿ ಗಲಾಟೆಯಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಬೆಂಕಿ ಹಾಕಿದ್ದಾರೆಂಬ ಶಂಕೆಯಿದೆ ಎಂದು ಗೃಹಸಚಿವ ಪರಮೇಶ್ವರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್‍ಎಸ್‍ಎಸ್ ಕಾರ್ಯಕರ್ತರು ಬೆಂಕಿ ಹಾಕಿದ್ದರೆಂಬ ಅನುಮಾನವನ್ನು ಕೆಲ ಪದಾಧಿಕಾರಿಗಳು ಸಭೆಯಲ್ಲಿ ವ್ಯಕ್ತಪಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ಆರ್‍ಎಸ್‍ಎಸ್‍ನವರೇ ಬೆಂಕಿ ಹಾಕಿದ್ದಾರೆ ಎನ್ನುವ ಬಗ್ಗೆ ಯಾವುದೇ ಖಚಿತ ಮಾಹಿತಿಯಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಅವರು ತಿಳಿಸಿದರು.
ಕಾವೇರಿ ವಿಚಾರದಲ್ಲಿ ಸರ್ಕಾರ ನಡೆದುಕೊಂಡಿರುವುದು ಸರಿಯಾಗಿದೆ. ಮಹದಾಯಿ ವಿಚಾರದಲ್ಲೂ ಪಕ್ಷ ಸರ್ಕಾರದ ಜೊತೆಗಿದೆ. ಎರಡು ವಿವಾದಗಳಲ್ಲಿ ಪ್ರಧಾನಿ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಜಿ ಪರಮೇಶ್ವರ್ ಆಗ್ರಹಿಸಿದರು.
ಜೆಡಿಎಸ್‍ಗೆ ಮೇಯರ್ ಸ್ಥಾನ ಕೊಡುವುದು ಬೇಡ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಎಚ್‍ಡಿ ದೇವೇಗೌಡ, ಎಚ್‍ಡಿಕೆ ಜೊತೆ ಚರ್ಚೆ ನಡೆಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಮೈತ್ರಿ ಬಗ್ಗೆ ಜೆಡಿಎಸ್ ನಾಯಕರನ್ನ ಸಂಪರ್ಕಿಸಿ ಚರ್ಚೆ ನಡೆಸುವ ವಿಚಾರ ಸಿಎಂಗೆ ಬಿಟ್ಟಿದ್ದು ಎಂದು ಅವರು ಹೇಳಿದರು.
The post ಕಾವೇರಿ ಗಲಾಟೆ: ಬೆಂಗಳೂರಿನಲ್ಲಿ ಬೆಂಕಿ ಹಚ್ಚಿದ್ದು ಆರ್‍ಎಸ್‍ಎಸ್ ಕಾರ್ಯಕರ್ತರು? appeared first on Kannada Public tv.