ಕೊಪ್ಪಳ: ಬೇಕೇ ಬೇಕು ನ್ಯಾಯ ಬೇಕು.. ಕಾವೇರಿಗಾಗಿ ಪತ್ರ ಚಳುವಳಿ… ಮೋದಿಜೀ ಮಧ್ಯ ಪ್ರವೇಶಿಸಿ ನಮಗೆ ನ್ಯಾಯಕೊಡಿ.
ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಗಂಗಾವತಿ ನಗರದ ಲಿಟಲ್ ಹಾರ್ಟ್ಸ್ ಶಾಲೆಯ ವಿದ್ಯಾರ್ಥಿಗಳು ಪತ್ರ ಚಳುವಳಿ ನಡೆಸುತ್ತಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಈಗ ರಾಜ್ಯದಲ್ಲೇ ನೀರಿಗೆ ಸಮಸ್ಯೆ ಇರುವಾಗ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ಹೀಗಾಗಿ ಈ ವಿಚಾರದಲ್ಲಿ ಕೂಡಲೇ ಪ್ರಧಾನಿ ಮಧ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಕೊಡಬೇಕೆಂದು ಒಂದನೇ ತರಗತಿಯಿಂದ ಹತ್ತನೇ ತರಗತಿಯಲ್ಲಿ ಓದುತ್ತಿರುವ 1800 ವಿದ್ಯಾರ್ಥಿಗಳು ನರೇದ್ರ ಮೋದಿಯವರಿಗೆ ಪತ್ರ ಬರೆದು ಚಳುವಳಿಯನ್ನು ನಡೆಸುತ್ತಿದ್ದಾರೆ.
The post ಕಾವೇರಿ ಸಮಸ್ಯೆ: ಮೋದಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಮಕ್ಕಳ ಪತ್ರ ಚಳುವಳಿ appeared first on Kannada Public tv.