ಮಡಿಕೇರಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸಲ್ಲಿ ಮಾಜಿ ಗೃಹ ಸಚಿವ ಕೆಜೆ ಜಾರ್ಜ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಹಾಗೂ ಪ್ರಣವ್ ಮೊಹಂತಿಗೆ ಕ್ಲೀನ್ ಚಿಟ್ ಸಿಕ್ಕಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಮಾಜಿ ಸಚಿವ ಜಾರ್ಜ್‍ಗೆ ಫುಲ್ ಕ್ಲೀನ್ ಚಿಟ್ ನೀಡಲಾಗಿದ್ದು ನಿರಾಳರಾಗಿದ್ದಾರೆ. ಎಡಿಜಿಪಿ ಎ.ಎಂ. ಪ್ರಸಾದ್ ಹಾಗೂ ಐಜಿ ಪ್ರಣವ್ ಮೊಹಂತಿಗೂ ಸಿಐಡಿ ಕ್ಲೀನ್ ಚಿಟ್ ನೀಡಿದೆ. ಕೆಜೆ ಜಾರ್ಜ್‍ಗೆ ಇದೇ ತಿಂಗಳಲ್ಲೇ ಮತ್ತೆ ಸಚಿವ ಪಟ್ಟ ಸಿಗುವ ಸಾಧ್ಯತೆ ಇದೆ. ಬೆಂಗಳೂರು ಅಭಿವೃದ್ಧಿ ಖಾತೆಯೇ ಜಾರ್ಜ್‍ಗೆ ಸಿಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಆದ್ರೆ, ಈಗಾಗ್ಲೆ ಸಿಐಡಿ ವಿರುದ್ಧ ಗಣಪತಿ ಕುಟುಂಬ ಅರ್ಜಿ ಸಲ್ಲಿಸಿದೆ. ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮೃತ ಗಣಪತಿ ಕುಟುಂಬ ಪಟ್ಟು ಹಿಡಿಯಲಿದೆ.
ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ
The post ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್, ಪ್ರಸಾದ್, ಮೊಹಂತಿಗೆ ಕ್ಲೀನ್‍ಚಿಟ್ appeared first on Kannada Public tv.